Mahashivaratri (Part 2)
ಇವತ್ತಿನ ಪೋಸ್ಟ್ನಲ್ಲಿ ಶಿವರಾತ್ರಿ ಹಬ್ಬದ ಆಚರಣೆ ಹಿನ್ನೆಲೆ ಹಾಗೂ ವಿಧಾನ ಹೇಳುತಿನಿ. ಮಹಾಶಿವರಾತ್ರಿಯ ದಿನ ಶಿವತತ್ತ್ವವು ಎಂದಿಗಿಂತ ೧೦೦೦ ಪಟ್ಟು ಹೆಚ್ಚು ಕಾರ್ಯನಿರತವಾಗಿರುತ್ತದೆ. ಶಿವತತ್ತ್ವದ ಲಾಭವು ಹೆಚ್ಚು ಪ್ರಮಾಣದಲ್ಲಿ ಸಿಗಲು ಮಹಾಶಿವರಾತ್ರಿಯ ದಿನ ಭಾವಪೂರ್ಣವಾಗಿ ಶಿವನ ಪೂಜೆ ಆರ್ಚನೆಯನ್ನು ಮಾಡಬೇಕು. ಅದರೊಂದಿಗೆ ಓಂ ನಮಃ ಶಿವಾಯ' ನಾಮಜಪವನ್ನು ಆದಷ್ಟು ಹೆಚ್ಚು ಮಾಡಬೇಕು, ಈ ದಿನದಂದು ಓಂ ನಮಃ ಶಿವಾಯ' ಈ ನಾಮಜಪವನ್ನು ಮಾಡುವ ಜೀವಕ್ಕೆ ಶಿವನ ಸೂಕ್ಷ್ಮ ಶಕ್ತಿ ಸಿಗುತ್ತದೆ, ಶಿವನ ಜನ್ಮವು ಸ್ಕೂಲ ಮತ್ತು ಸೂಕ್ಷ್ಮ ರೂಪದ ಕೆಟ್ಟ ಶಕ್ತಿಗಳನ್ನು ನಾಶ ಮಾಡಲು ಮತ್ತು ಮಾನವನ ಕಲ್ಯಾಣಕ್ಕಾಗಿ ಅಗಿದೆ. ಶಿವರಾತ್ರಿ ಆಚರಣೆಯ ಹಿನ್ನಲೆ ಕೈಲಾಸವಾಸಿ ಶಿವನಿಗೆ ಶಿವರಾತ್ರಿ ಅತ್ಯಂತ ಪ್ರಿಯವಾದ ದಿನ. ಶಿವರಾತ್ರಿಯಂದು ತನ್ನನ್ನು ಪೂಜಿಸುವ ಭಕ್ತರಿಗೆ ತಾನು ವಿಶೇಷವಾಗಿ ಅನುಗ್ರಹ ನೀಡುವುದಾಗಿ ಸ್ವತ: ಶಿವನೇ ಪಾರ್ವತಿಯಲ್ಲಿ ಅರುಹಿದ್ದಾನೆ ಎನ್ನುತ್ತದೆ ಶಿವಪುರಾಣ, ಮಾಘ ಬಹುಳ ಚತುರ್ದಶಿಯ ರಾತ್ರಿಯೇ ಶಿವ ಪಾರ್ವತಿಯನ್ನು ವರಿಸಿದ್ದನಂತೆ. ಹೀಗಾಗಿ ಅಂದು ರಾತ್ರಿ ದೇವಾನು ದೇವತೆಗಳೆಲ್ಲರೂ ಜಾಗರಣೆ ಮಾಡಿ, ಗಿರಿಜಾ ಕಲ್ಯಾಣ ವೀಕ್ಷಿಸಿ, ಶಿವಪಾರ್ವತಿಯರಿಬ್ಬರನ್ನೂ ಪೂಜಿಸಿದರಂತೆ. ಹೀಗಾಗಿಯೇ ಜಾಗರಣೆ ಪದ್ಧತಿ ಆಚರಣೆಗೆ ಬಂದಿದೆ ಎನ್ನಲಾಗುತ್ತದೆ. ಪ್ರತಿ ಸಂವತ್ಸರದಲ್ಲಿ, ಶಿಶಿರ ಋತುವಿನ ಮಾಘ ಮಾಸದ ಕೃಷ್ಣಪಕ್ಷ ಚತುರ್ದಶಿಯಂದು, ರಾತ್ರ...