Alli nodalu Rama



ಅಲ್ಲಿ ನೋಡಲು ರಾಮ ಇಲ್ಲಿ ನೋಡಲು ರಾಮ
ಎಲ್ಲೆಲ್ಲಿ ನೋಡಿದರು ಅಲ್ಲಿ ಶ್ರೀರಾಮ || ಪ ||

ರಾವಣನ ಮೂಲಬಲ ಕಂಡು ಕಪಿಸೇನೆ
ಆವಾಗಲೆ ಬೆದರಿ ಓಡಿದವು
ಈ ವೇಳೆ ನರನಾಗಿ ಇರಬಾರದೆಂದೆಣಿಸಿ
ದೇವ ರಾಮಚಂದ್ರ ಜಗವೆಲ್ಲ ತಾನಾದ || ೧ ||

ಅವನಿಗೆ ಇವ ರಾಮ ಇವನಿಗೆ ಅವ ರಾಮ
ಅವನಿಯೊಳ್ ಈಪರಿ ರೂಪವುಂಟೆ
ಲವಮಾತ್ರದಿ ಅಸುರದಿ ದುರುಳರೆಲ್ಲರು ಸೇರಿ
ಅವರವರೆ ಹೊಡೆದಾಡಿ ಹತರಾಗಿ ಹೋದರು || ೨ ||

ಹನುಮರಾದಿಯಾಗಿ  ಜನರು ತಬ್ಬಿಕೊಂಡು
ಕುಣಿಕುಣಿದಾಡಿದರು ಹರುಷದಿಂದ
ಕ್ಷಣದಲಿ ಪುರಂದರ ವಿಠಲರಾಯನು
ಕೊನೆಗೊಡೆಯನು ತಾನೊಬ್ಬನಾಗಿ ನಿಂತ || ೩||

Comments

Popular posts from this blog

Hanumane Tandeyu Hanumane Thayiyu lyrics

Sankshipta Guru Charitre in kannada

Sri Rama Chandirane